alex Certify ಆಸ್ಪತ್ರೆಗೆ ಬೆಂಕಿ ತಗುಲಿ ಘೋರ ದುರಂತ: ವೈದ್ಯ ದಂಪತಿ ಸೇರಿ 5 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಗೆ ಬೆಂಕಿ ತಗುಲಿ ಘೋರ ದುರಂತ: ವೈದ್ಯ ದಂಪತಿ ಸೇರಿ 5 ಜನ ಸಾವು

ರಾಂಚಿ: ಜಾರ್ಖಂಡ್‌ ನ ಧನ್‌ ಬಾದ್‌ ನಲ್ಲಿರುವ ಖಾಸಗಿ ನರ್ಸಿಂಗ್ ಹೋಂನಲ್ಲಿ ಶನಿವಾರ ಸಂಭವಿಸಿದ ಬೆಂಕಿಯಲ್ಲಿ ಇಬ್ಬರು ವೈದ್ಯರು ಸೇರಿದಂತೆ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ.

ಮೃತರಲ್ಲಿ ವೈದ್ಯಕೀಯ ಸಂಸ್ಥೆಯ ಮಾಲೀಕ ಡಾ.ವಿಕಾಸ್ ಹಜ್ರಾ, ಅವರ ಪತ್ನಿ ಡಾ. ಪ್ರೇಮಾ ಹಜ್ರಾ, ಮಾಲೀಕರ ಸೋದರಳಿಯ ಸೋಹನ್ ಖಮಾರಿ ಮತ್ತು ಮನೆಯ ಸಹಾಯಕಿ ತಾರಾದೇವಿ ಸೇರಿದ್ದಾರೆ.

ರಾಂಚಿಯಿಂದ ಸುಮಾರು 170 ಕಿ.ಮೀ ದೂರದಲ್ಲಿರುವ ಧನ್‌ ಬಾದ್‌ ನ ಬ್ಯಾಂಕ್ ಮೋರ್ ಪ್ರದೇಶದಲ್ಲಿರುವ ನರ್ಸಿಂಗ್ ಹೋಂ-ಕಮ್-ಪ್ರೈವೇಟ್ ಹೌಸ್‌ನ ಸ್ಟೋರ್ ರೂಮ್‌ನಲ್ಲಿ ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಧನ್‌ಬಾದ್ ಉಪವಿಭಾಗೀಯ ಮ್ಯಾಜಿಸ್ಟ್ರೇಟ್(ಎಸ್‌ಡಿಎಂ) ಪ್ರೇಮ್ ಕುಮಾರ್ ತಿವಾರಿ, ಸ್ಟೋರ್ ರೂಮ್‌ ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಉಸಿರುಗಟ್ಟಿದ ಕಾರಣ ಮಾಲೀಕರು ಮತ್ತು ಅವರ ಪತ್ನಿ ಸೇರಿದಂತೆ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ಒಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ. ತನಿಖೆ ನಡೆಯುತ್ತಿದೆ. ನಾಲ್ವರು ಮೃತರನ್ನು ಗುರುತಿಸಲಾಗಿದ್ದು, ಐದನೇ ವ್ಯಕ್ತಿಯನ್ನು ಇನ್ನೂ ಗುರುತಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...