ಜಾರ್ಖಂಡ್ನ ಡುಮ್ಕಾ ಜಿಲ್ಲೆಯಲ್ಲಿ ಮಂಗಳವಾರ 17 ಮಂದಿ ಕಾಮಾಂಧರು ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಈ ಘಟನೆ ಕುರಿತು ಕಳವಳ ವ್ಯಕ್ತಪಡಿಸಿದ ರಾಷ್ಟ್ರೀಯ ಮಹಿಳಾ ಆಯೋಗ 2 ತಿಂಗಳೊಳಗಾಗಿ ತನಿಖೆ ಪೂರ್ಣಗೊಳಿಸುವಂತೆ ಜಾರ್ಖಂಡ್ ಪೊಲೀಸರಿಗೆ ಸೂಚನೆ ನೀಡಿದೆ.
ಮಂಗಳವಾರ ರಾತ್ರಿ ಸಂತ್ರಸ್ತೆ ಮತ್ತಾಕೆಯ ಪತಿ ಮಾರುಕಟ್ಟೆಯಿಂದ ವಾಪಸ್ಸಾಗುತ್ತಿದ್ದ ವೇಳೆ 17 ಮಂದಿ ಪುರುಷರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರಿಗಳೆಲ್ಲರೂ ಪಾನಮತ್ತರಾಗಿದ್ದರು ಎಂದು ಸಂತ್ರಸ್ತೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.
ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ ತನಿಖೆಯ ಬಗ್ಗೆ ಇಂಚಿಂಚೂ ಮಾಹಿತಿಯನ್ನೂ ಕಲೆ ಹಾಕುತ್ತಿದೆ.