alex Certify ಮೂವರು ಉಗ್ರರು ಫಿನಿಶ್: ಶೋಪಿಯಾನ್ ನಲ್ಲಿ ಎನ್ ಕೌಂಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೂವರು ಉಗ್ರರು ಫಿನಿಶ್: ಶೋಪಿಯಾನ್ ನಲ್ಲಿ ಎನ್ ಕೌಂಟರ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಭದ್ರತಾಪಡೆಗಳು ಎನ್ಕೌಂಟರ್ ನಡೆಸಿದ್ದು, ಮೂವರನ್ನು ಹತ್ಯೆ ಮಾಡಲಾಗಿದೆ.

ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹಾದಿಪೋರಾ ಪ್ರದೇಶದಲ್ಲಿ ಶನಿವಾರದಿಂದ ಕಾರ್ಯಾಚರಣೆ ನಡೆಸಲಾಗಿದೆ. ರಾತ್ರಿ ಇಡೀ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಸದೆಬಡಿಯಲಾಗಿದೆ.

ಉಗ್ರ ಸಂಘಟನೆಗೆ ಸೇರ್ಪಡೆಯಾದ ಯುವಕರಿಗೆ ಶರಣಾಗತಿಯಾಗಲು ಸೂಚನೆ ನೀಡಲಾಗಿದೆ. ಆದರೆ, ಗುಂಡಿನ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಭದ್ರತಾಪಡೆಗಳು ಪ್ರತಿದಾಳಿ ನಡೆಸಿದ್ದಾರೆ. ಪೋಷಕರು ಕೂಡ ಶರಣಾಗಲು ಉಗ್ರರಿಗೆ ಮನವಿ ಮಾಡಿದ್ದರು. ಆದರೆ, ಬೇರೆ ಭಯೋತ್ಪಾದಕರು ಅವರಿಗೆ ಶರಣಾಗಲು ಬಿಡಲಿಲ್ಲ ಎಂದು ಕಾಶ್ಮೀರ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ವಿಜಯ್ ಕುಮಾರ್ ಹೇಳಿದ್ದಾರೆ.

ಉಗ್ರರು ಅವಿತಿರುವ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾಪಡೆಗಳು ಹಾದಿಪೋರಾ ಪ್ರದೇಶದಲ್ಲಿ ಕಾರ್ಯಾಚರಣೆ ಕೈಗೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...