ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಮೋಚ್ವಾ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.
ಮೋಚ್ವಾ ಪ್ರದೇಶದಲ್ಲಿ ನಡೆದ ಎನ್ಕೌಂಟರ್ ನಂತರ ಒಬ್ಬ ಅಪರಿಚಿತ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಶನಿವಾರ ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆ ಎನ್ಕೌಂಟರ್ ಆಗಿ ಬದಲಾಯಿತು ಎಂದು ಹೇಳಿದ್ದಾರೆ.
ಮೋಚ್ವಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ. ಸ್ಥಳದಿಂದ ಒಂದು ಎಕೆ 47 ರೈಫಲ್, ಒಂದು ಪಿಸ್ತೂಲ್ ವಶಕ್ಕೆ ಪಡೆಯಲಾಗಿದೆ. ಭದ್ರತಾ ಪಡೆಗಳು ಸ್ಥಳದಲ್ಲಿಯೇ ಇದ್ದು, ಕಾರ್ಯಾಚರಣೆ ಮುಂದುವರೆಸಿವೆ. ಹತ್ಯೆಗೀಡಾದ ಉಗ್ರನ ಗುರುತು ಮತ್ತು ಸಂಘಟನೆ ಸಂಬಂಧವನ್ನು ಪತ್ತೆ ಹಚ್ಚಲಾಗುತ್ತಿದೆ.
ಶುಕ್ರವಾರ ಸಂಜೆ, ರಂಬಾನ್ ಜಿಲ್ಲೆಯ ಬನಿಹಾಲ್ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.