ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಸಿಬ್ಬಂದಿ ಇಬ್ಬರು ಉಗ್ರರನ್ನು ಹೊಡೆದುರುಸಿದ್ದಾರೆ.
ಪೋಸ್ ಕರೆರಿ ಪ್ರದೇಶದಲ್ಲಿ ಭಯೋತ್ಪಾದಕರು ಅವಿತಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ವೇಳೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಪಡೆ ಸಿಬ್ಬಂದಿ ಕೂಡ ಗುಂಡಿನ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.
ಈ ವೇಳೆ ಡ್ಯಾನಿಶ್ ಭಟ್ ಅಕಾ ಕೋಕಬ್ ದುರೀ, ಬಶರತ್ ನಬೀ ಎಂಬುವರು ಮೃತಪಟ್ಟಿದ್ದಾರೆ. ಇವರು ನಿಷೇಧಿತ ಹಿಜ್ ಬುಲ್ ಮುಜಾಹಿದ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದರು. ಕಳೆದ ವರ್ಷ ಯೋಧ ಸಲೀಂ ಮತ್ತು ಇಬ್ಬರು ನಾಗರೀಕರ ಹತ್ಯೆ ಪ್ರಕರಣದಲ್ಲಿ ಇವರು ಭಾಗಿಯಾಗಿದ್ದರು ಎಂದು ಪೋಲಿಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.