alex Certify ಪತ್ನಿ ಮೇಲೆ ದೌರ್ಜನ್ಯ ಎಸಗಿದ್ದ ಪತಿ ಸೇರಿ ಮೂವರಿಗೆ ಶಿಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿ ಮೇಲೆ ದೌರ್ಜನ್ಯ ಎಸಗಿದ್ದ ಪತಿ ಸೇರಿ ಮೂವರಿಗೆ ಶಿಕ್ಷೆ

ಶಿವಮೊಗ್ಗ: ಪತ್ನಿ ಮೇಲೆ ದೌರ್ಜನ್ಯ ಎಸಗಿದ್ದ ಪತಿ ಸೇರಿ ಮೂವರಿಗೆ ಶಿಕ್ಷೆ ವಿಧಿಸಿ ಎರಡನೇ ಜೆಎಮ್ಎಫ್ಸಿ ನ್ಯಾಯಾಲಯ ಆದೇಶಿಸಿದೆ.

ನ್ಯಾಯಾಧೀಶರಾದ ಎಸ್.ಆರ್. ಸನ್ಮತಿ ಅವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. 2017ರಲ್ಲಿ ಚಿಕ್ಕಮಗಳೂರು ಜಿಲ್ಲೆಯ 25 ವರ್ಷದ ಯುವತಿಗೆ ಶಿವಮೊಗ್ಗದ ವಿನೋದ್ ಜೊತೆಗೆ ಮದುವೆಯಾಗಿತ್ತು. ವಿನೋದ್ ಗೆ ಈ ಮೊದಲೇ ಬೇರೆ ಮದುವೆಯಾಗಿದ್ದು, ಈ ಬಗ್ಗೆ ಪ್ರಶ್ನಿಸಿದಾಗ ಕೌಟುಂಬಿಕ ದೌರ್ಜನ್ಯ ನಡೆಸಲಾಗಿತ್ತು.

ನೊಂದ ಯುವತಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ವಿನೋದ್ ಗೆ 6 ವರ್ಷ ಶಿಕ್ಷೆ ಮತ್ತು 20 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ಜಯಮ್ಮ ಮತ್ತು ಶ್ರೀನಿವಾಸ್ ಅವರಿಗೆ ತಲಾ ಮೂರು ವರ್ಷ ಶಿಕ್ಷೆ, 10,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಕಿರಣ್ ಕುಮಾರ್ ವಾದ ಮಂಡಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...