ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಮೋಟಾರ್ ವೆಹಿಕಲ್ ಇನ್ಸ್ ಪೆಕ್ಟರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಖಾಲಿ ಇರುವ 76 ಮೋಟಾರ್ ವೆಹಿಕಲ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿಗಾಗಿಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಲಾಗಿದೆ.

ಈ ಹಿಂದೆ ಅರ್ಜಿ ಸಲ್ಲಿಕೆಗೆ ಮೇ 21 ಕೊನೆಯ ದಿನ ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಈಗ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 30 ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳು ಹಾಗೂ ವಿದ್ಯಾರ್ಹತೆ ವಿವರ:
ಉಳಿಕೆ ಮೂಲ ವೃಂದದಲ್ಲಿ 70 ಹಾಗೂ ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳ್ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೆಪಿಎಸ್‌ಸಿಯ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ ಎಸ್ ಎಲ್ ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

ಅರ್ಜಿ ಸಲ್ಲಿಸುವವರು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷದವರಾಗಿರಬೇಕು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆಯಾಗಲಿದೆ.
ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1ರ ಅಭ್ಯರ್ಥಿಗಳಿಗೆ 5 ವರ್ಷ, ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪಿಡಬ್ಲ್ಯುಡಿ / ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಮಾಜಿ ಯೋಧರು ಅರ್ಜಿ ಶುಲ್ಕವಾಗಿ 50 ರೂ., ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 300 ರೂ. ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ವಿಧಾನ:
ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ವೇತನ:
ಆಯ್ಕೆಯಾದವರಿಗೆ 33,450 ರೂ. – 62,600 ರೂ. ಮಾಸಿಕ ವೇತನ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ವಿವರಗಳಿಗಾಗಿ ಹೆಲ್ಪ್‌ಲೈನ್‌ ನಂಬರ್‌: 080-30574957 / 30574901ಕ್ಕೆ ಕರೆ ಮಾಡಿ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read