alex Certify SSLC, PUC, ITI, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC, PUC, ITI, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಸಿಹಿ ಸುದ್ದಿ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ಹಾಗೂ ಎಮ್.ಎಸ್.ಬಿ. ಕಲಾ ಮತ್ತು ವಾಣಿಜ್ಯ ಕಾಲೇಜು, ದಾವಣಗೆರೆ. ಇವರ ಸಂಯುಕ್ತಾಶ್ರಯದಲ್ಲಿ ಜೂ.23 ರಂದು ಬೆಳಗ್ಗೆ 10 ಗಂಟೆಗೆ, ಎಮ್.ಎಸ್.ಬಿ. ಕಲಾ ಮತ್ತು ವಾಣಿಜ್ಯ ಕಾಲೇಜು, ಎ.ವಿ.ಕೆ. ಕಾಲೇಜು ರಸ್ತೆ, ದಾವಣಗೆರೆ ಇಲ್ಲಿ “ಉದ್ಯೋಗ ಮೇಳ” ವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ,, ಪಿಯುಸಿ, ಐ.ಟಿ.ಐ, ಡಿಪ್ಲೊಮಾ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ/ಬಿ.ಬಿ.ಎಂ, ಬಿ.ಸಿ.ಎ ಹಾಗೂ ಸ್ನಾತಕೋತ್ತರ ಪದವಿ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಜೂ.23ರ ಗುರುವಾರ ಬೆಳಗ್ಗೆ 10-00 ಗಂಟೆಗೆ ಕನಿಷ್ಠ 5 ಸೆಟ್ ಬಯೋಡಾಟಾ, ಆಧಾರ್ ಕಾರ್ಡ್ ನೊಂದಿಗೆ ಎಮ್.ಎಸ್.ಬಿ. ಕಲಾ ಮತ್ತು ವಾಣಿಜ್ಯ ಕಾಲೇಜು, ಎ.ವಿ.ಕೆ. ಕಾಲೇಜು ರಸ್ತೆ ದಾವಣಗೆರೆ ಇಲ್ಲ್ಲಿ ಭಾಗವಹಿಸಿ ಸದರಿ “ಉದ್ಯೋಗ ಮೇಳ” ದÀ ಸದುಪಯೋಗ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗೆ 08192-259446, 6361550016, 7406323294 ಸಂಪರ್ಕಿಸಬಹುದೆಂದು ಉದ್ಯೋಗ ವಿನಿಮಯ ಅಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...