ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಜನವರಿ 19 ರಂದು ಬೆಳಿಗ್ಗೆ 10 ಗಂಟೆಗೆ ಸಾಗರ ರಸ್ತೆ ಗುತ್ಯಪ್ಪ ಕಾಲೋನಿ-ಪಂಪಾನಗರದ 2ನೇ ತಿರುವಿನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಎನ್.ಸಿ.ಎಸ್.ಪಿ ಯೋಜನೆಯಡಿ ಉದ್ಯೋಗ ಮೇಳವನ್ನು ಏರ್ಪಡಿಸಿದೆ.
ಈ ಉದ್ಯೋಗ ಮೇಳದಲ್ಲಿ 8ನೇ ತರಗತಿ, ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿದ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡಾಟ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-255293, ಮೊ.8861890866, 9036067511/ 9535312531 ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.