ತುಮಕೂರು,ಶಿರಾ: ನಗರದ ಸರಕಾರಿ ಐಟಿಐ ಕಾಲೇಜಿನಲ್ಲಿ ಹಿಂದೂ ಸ್ತಾನ್ ಏರೋನಾಟಿಕಲ್ ಲಿಮಿಟೆಡ್ (ಎಚ್‌ಎಎಲ್) ವತಿಯಿಂದ ಇಂದು ನೇರ ಸಂದರ್ಶನ ನಡೆಯಲಿದೆ.
ಬೆಳಿಗ್ಗೆ 9 ಗಂಟೆ ಯಿಂದ ನೇರ ಸಂದರ್ಶನ ಏರ್ಪಡಿಸಲಾಗಿದ್ದು, ಐಟಿಐ, ಡಿಪ್ಲೋ ಮೋ, ಬಿಇ, ಬಿಕಾಂ, ಬಿಬಿಎ, ಬಿಸಿಎ ಹಾಗೂ ಇತರ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ವಿದ್ಯಾರ್ಹತೆಯ ದಾಖಲಾತಿಗಳೊಂದಿಗೆನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ ಎಂದು ಶಿರಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಶ್ರೀನಿವಾಸ್ ಮೂರ್ತಿ ಪ್ರಕಟಣೆಯಲ್ಲಿ ಹೊರಡಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 7892794612 ಸಂಪರ್ಕಿಸಬಹುದು ಎಂದು ಪ್ರಕಟಣೆ ಹೊರಡಿಸಿದ್ದಾರೆ.