ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ (ಕಂಡಕ್ಟರ್) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 2500 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಏ.10 ಕೊನೆಯ ದಿನಾಂಕವಾಗಿದೆ.
ಮಿಕ್ಕುಳಿದ ವೃಂದ : 2286
ಸ್ಥಳೀಯ ವೃಂದ : 214
ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 10-03-2024
ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10-04-2024
ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ : 13-04-2024
ಶೈಕ್ಷಣಿಕ ಅರ್ಹತೆ : ಪಿಯುಸಿ (ಆರ್ಟ್ಸ್/ಕಾಮರ್ಸ್/ಸೈನ್ಸ್) ಅಥವಾ 10+2 ICSE/ CBSE ಅಥವಾ ತಾಂತ್ರಿಕ ಶಿಕ್ಷಣ ಇಲಾಖೆಯಿಂದ 3 ವರ್ಷಗಳ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರತಕ್ಕದ್ದು ಜೊತೆಗೆ ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್ ಅನ್ನು ಹೊಂದಿರತಕ್ಕದ್ದು.
ವಯೋಮಿತಿ
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವ ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಮಾಜಿ ಸೈನಿಕ, ಇಲಾಖಾ ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,660 – ರೂ. 25,300 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ..?
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ http://kea.kar.nic.in ನಲ್ಲಿ ಮಾರ್ಚ್ 10 ರಂದು ತೋರಿಸುವ ಲಿಂಕ್ ಅನ್ನು ಆಯ್ಕೆ ಮಾಡಿ, ಆನ್ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು.
ಸಂಸ್ಥೆಯ ಹೆಸರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ವೆಬ್ಸೈಟ್ ವಿಳಾಸ
https://mybmtc.karnataka.gov.in/english