alex Certify JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘BEL’ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘BEL’ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಈ ಅಧಿಸೂಚನೆಯ ಮೂಲಕ ಒಟ್ಟು 55 ಎಂಜಿನಿಯರಿಂಗ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ನಲ್ಲಿ ಎಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 23, 2024. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬಿಇಎಲ್ bel-india.in ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ನೇಮಕಾತಿಗಾಗಿ ಫೆಬ್ರವರಿ ತಿಂಗಳಲ್ಲಿ ಪರೀಕ್ಷೆ ನಡೆಯಲಿದೆ.

ಅರ್ಹತೆಗಳು :    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿಟೆಕ್/ಬಿಎಸ್ಸಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ: 32 ವರ್ಷ ಮೀರಿರಬಾರದು.

ಸಂಬಳ: ತಿಂಗಳಿಗೆ 40,000 ರಿಂದ 55,000 ರೂ.

ಕೆಲಸ ಮಾಡುವ ಸ್ಥಳ: ಪಂಜಾಬ್.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿಯನ್ನು ಸಹಾಯಕ ವ್ಯವಸ್ಥಾಪಕರು (ಎಚ್ಆರ್), ಬಿಇಎಲ್, ಜಾಲಹಳ್ಳಿ, ಬೆಂಗಳೂರು ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 23.01.2024

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...