alex Certify JOB ALERT : ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

jobsಮಡಿಕೇರಿ : ಕೊಡಗು ಜಿಲ್ಲೆಯ ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 2 ಹುದ್ದೆಗಳಿಗೆ ಒಪ್ಪಂದದ ಆಧಾರದ ಮೇಲೆ 2023-24ನೇ ಸಾಲಿನ ಸೀಮಿತ ಅವಧಿಗೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಸೋಮವಾರಪೇಟೆ ತಾಲ್ಲೂಕು ಹಾಗೂ ವಿರಾಜಪೇಟೆ ತಾಲ್ಲೂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಷರತ್ತಿಗೆ ಒಳಪಟ್ಟು ಅರ್ಜಿ ಆಹ್ವಾನಿಸಲಾಗಿದೆ.

ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ವಿದ್ಯಾರ್ಹತೆ ಎಂ.ಎಸ್ಸಿ (ಕೃಷಿ/ ತೋಟಗಾರಿಕೆ/ ಮೀನುಗಾರಿಕೆ/ ಅರಣ್ಯ/ ರೇಷ್ಮೆ). ಕನಿಷ್ಠ 2 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಂ.ಎಸ್.ಆಫೀಸ್‍ನಲ್ಲಿ ಪರಿಣಿತಿ ಹೊಂದಿರಬೇಕು. ಗರಿಷ್ಟ ವಯೋಮಿತಿ 45 ವರ್ಷ ಮಾಸಿಕ ರೂ.30 ಸಾವಿರ ಆಗಿದೆ.

ಈ ಹುದ್ದೆಗಳಿಗೆ ಅರ್ಹರಿರುವ ಅಭ್ಯರ್ಥಿಗಳು ನವೆಂಬರ್, 07 ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ(ಆತ್ಮ ವಿಭಾಗ) ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ ಅವರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...