ಬೆಂಗಳೂರು : ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ. 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಯಾವುದೇ ತಾಂತ್ರಿಕ, ತಾಂತ್ರಿಕೇತರ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪಾಸ್/ಫೇಲ್ ಆದ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್ಲೈನ್ನಲ್ಲಿ ನೋಂದಾಯಿಸಿಕೊಂಡು ಭಾಗಿಯಾಗಬಹುದಾಗಿದೆ.
ಅರಮನೆ ಮೈದಾನ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, ಈ ಉದ್ಯೋಗ ಮೇಳದಲ್ಲಿ ಸುಮಾರು 500 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ಇತರೆ ವಿದ್ಯಾರ್ಹತೆ ಹೊಂದಿರುವ ಜಿಲ್ಲೆಯ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ನೊಂದಣಿ ಮಾಡಿಕೊಳ್ಳಬಹುದು.
ಸಿಎಂ ಸಿದ್ದರಾಮಯ್ಯನವರು ರಾಜ್ಯದ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ದೊರಕಿಸುವ ಸಲುವಾಗಿ ವಿವಿಧ ಇಲಾಖೆಗಳ (ಉನ್ನತ ಶಿಕ್ಷಣ, ಬೃಹತ್ ಕೈಗಾರಿಕೆ, ಕೌಶಲ್ಯಾಭಿವೃದ್ದಿ ಇಲಾಖೆ, ಯುವಸಬಲೀಕರಣ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇತ್ಯಾದಿಗಳು) ಸಚಿವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ಆ ಸಮಿತಿ ಮಾರ್ಗದರ್ಶನದಂತೆ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಅಯೋಜಿಸಿದ್ದಾರೆ.
ನೊಂದಣಿ ಹೇಗೆ
ಆಸಕ್ತ ಅಭ್ಯರ್ಥಿಗಳು https://skillconnect.kaushalkar.com/ ನಲ್ಲಿ ಹೆಸರು ನೊಂದಣಿ ಮಾಡಿಕೊಂಡು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ನೊಂದಣಿ ಹಂತಗಳು..!
ಹಂತ 1 : https://skillconnect.kaushalkar.com/new ಭೇಟಿ ನೀಡಿ
ಹಂತ 2 : ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ
ಹಂತ 3 : ಉದ್ಯೋಗ ಮೇಳ ಕ್ಲಿಕ್ ಮಾಡಿ
ಹಂತ 4: ಅಭ್ಯರ್ಥಿ ನೋಂದಣಿ ಮೇಲೆ ಕ್ಲಿಕ್ ಮಾಡಿ
ಹಂತ 5 : ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಿ
ಯುವ ಸಮೃದ್ಧಿ ಸಮ್ಮೇಳನವಾದ ಈ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದ ಕಾರ್ಯಕ್ರಮದಲ್ಲಿ ರಾಜ್ಯದ ಯುವ ಜನತೆಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಉಪಯುಕ್ತವಾಗುವಂತೆ ಹಾಗೂ ರಾಜ್ಯದ ಆಸಕ್ತ ಯುವಜನತೆಯು ಸ್ವಯಂ ಉದ್ಯೋಗಿಗಳಾಗಲು / ಸ್ವಾವಲಂಭಿಗಳಾಗಲು ಅರಿವು ಅರಿಹ ಮೂಡಿಸಿ, ಪ್ರೇರೇಪಿಸಿ, ಜೀವನದಲ್ಲಿ ಭರವಸೆಯ ಬೆಳಕು ಮೂಡಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳು / ಪ್ಲೇಸ್ಮೆಂಟ್ಲ್ ಅಧಿಕಾರಿಗಳು ಸೂಚನಾ ಫಲಕದಲ್ಲಿ ಪ್ರಕಟಿಸಿ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ ಪದವಿ ಮುಗಿಸಿ ಹೊರಗುಳಿದಿರುವ ವಿದ್ಯಾರ್ಥಿಗಳು ಈ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳಲು ಅನುವಾಗುವಂತೆ ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ.
ವಿ.ಸೂಚನೆ: ಮೇಲ್ಕಂಡ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳು ಕರ್ನಾಟಕ ಸ್ಕಿಲ್ ಕನೆಕ್ಟ್ ಪೋರ್ಟಲ್ (https://skillconnect.kaushalkar.com) 2 3d ಮೇಳ ಐಕಾನ್ ಕ್ಲಿಕ್ ಮಾಡಿ, ಅಭ್ಯರ್ಥಿಗಳ ನೋಂದಣಿ ಐಕಾನ್ ಕ್ಲಿಕ್ ಮಾಡಿ ಅವಶ್ಯ ದಾಖಲಾತಿ | ಮಾಹಿತಿಯನ್ನು ಅಳವಡಿಸುವುದು. ಪದವಿ ಪೂರೈಸದ ವಿದ್ಯಾರ್ಥಿಗಳು ಪದವಿ ಪೂರ್ವ ಅಂಕಪಟ್ಟಿಯನ್ನು ದಾಖಲಿಸುವುದು.