ಬೆಂಗಳೂರು: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯಲ್ಲಿರುವ 50 ಸಹಾಯಕ ಎಂಜಿನಿಯರ್ ಮತ್ತು 14 ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ) ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ 50 ಸಹಾಯಕ ಎಂಜಿನಿಯರ್ ಮತ್ತು 14 ಪ್ರಥಮ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಫೆ. 10ರಿಂದ ಮಾರ್ಚ್ 10 ವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಶುಲ್ಕ ಪಾವತಿಸಲು ಮಾ. 14 ಕೊನೆಯ ದಿನವಾಗಿದೆ.
ಸಾಮಾನ್ಯ ಮತ್ತು ಇತರ ಪ್ರವರ್ಗಗಳಿಗೆ 750 ರೂ. ಮತ್ತು ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ 500 ರೂ ನಿಗದಿ ಮಾಡಲಾಗಿದೆ.ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ https://kea.kar.nic.in/ ಭೇಟಿ ನೀಡಬಹುದಾಗಿದೆ.