alex Certify Job Alert : `ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್ : `SBI’ ನಲ್ಲಿ 2,000 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Job Alert : `ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್ : `SBI’ ನಲ್ಲಿ 2,000 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸಾರ್ವಜನಿಕ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಿರುದ್ಯೋಗಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು,2,000 ಪ್ರೊಬೇಷನರಿ ಆಫೀಸರ್ (ಪಿಒ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈಗಾಗಲೇ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ಅಧಿಸೂಚನೆಯ ಮೂಲಕ 2000 ಪ್ರೊಬೇಷನರಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 60 ಪ್ರತಿಶತ ಅಂಕಗಳೊಂದಿಗೆ ಯಾವುದೇ ಪದವಿಯನ್ನು ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಆನ್ಲೈನ್ ಅರ್ಜಿ ಪ್ರಕ್ರಿಯೆ ಸೆಪ್ಟೆಂಬರ್ 7 ರ ಇಂದಿನಿಂದ ಪ್ರಾರಂಭವಾಗಲಿದೆ. ಆನ್ ಲೈನ್ ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಪ್ರಿಲಿಮ್ಸ್, ಮುಖ್ಯ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ದೇಶಾದ್ಯಂತ ವಿವಿಧ ಸ್ಥಳಗಳಲ್ಲಿರುವ ಎಸ್ಬಿಐ ಶಾಖೆಗಳಲ್ಲಿ ನೇಮಿಸಲಾಗುತ್ತದೆ.

ಹುದ್ದೆಗಳ ವರ್ಗವಾರು ವಿವರ.

ಎಸ್ಸಿ ವರ್ಗದ ಹುದ್ದೆಗಳು: 300

ಎಸ್ಟಿ ವರ್ಗದ ಹುದ್ದೆಗಳು: 150

ಒಬಿಸಿ ವರ್ಗದ ಹುದ್ದೆಗಳು: 540

ಇಡಬ್ಲ್ಯೂಎಸ್ ವಿಭಾಗದಲ್ಲಿ ಹುದ್ದೆಗಳು: 200

ಯುಆರ್ ವಿಭಾಗದಲ್ಲಿ ಹುದ್ದೆಗಳು: 810

ವಯೋಮಿತಿ: ಏಪ್ರಿಲ್ 1, 2023ಕ್ಕೆ ಅನ್ವಯವಾಗುವಂತೆ 20 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೀಸಲಾತಿ ವರ್ಗಗಳಿಗೆ ವಯಸ್ಸಿನ ದೃಷ್ಟಿಯಿಂದ ವಿನಾಯಿತಿ ಇರುತ್ತದೆ.

ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 27, 2023ರೊಳಗೆ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ 750 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಎಸ್ಸಿ, ಎಸ್ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಆಯ್ಕೆಯಾದ ಅಭ್ಯರ್ಥಿಗಳು ದೇಶಾದ್ಯಂತದ ಎಸ್ಬಿಐ ಶಾಖೆಗಳಲ್ಲಿ ಕೆಲಸ ಮಾಡಬೇಕಾಗುತ್ತದೆ. ಮಾಸಿಕ ವೇತನ 41,960 ರೂ., ಇತರ ಭತ್ಯೆಗಳನ್ನು ನೀಡಲಾಗುವುದು.

ಇವು ಪ್ರಮುಖ ದಿನಾಂಕಗಳು.

ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಸೆಪ್ಟೆಂಬರ್ 7, 2023 ರಿಂದ ಸೆಪ್ಟೆಂಬರ್ 27, 2023

ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : ಸೆಪ್ಟೆಂಬರ್ 27, 2023

ಪ್ರಿಲಿಮಿನರಿ ಪರೀಕ್ಷೆಯ ಕಾಲ್ ಲೆಟರ್ ಡೌನ್ಲೋಡ್ ಮಾಡಿ: ಅಕ್ಟೋಬರ್ ಎರಡನೇ ವಾರದಿಂದ, 2023

ಪ್ರಿಲಿಮಿನರಿ ಪರೀಕ್ಷೆಯ ದಿನಾಂಕ: ನವೆಂಬರ್ 2023

ಪ್ರಿಲಿಮಿನರಿ ಪರೀಕ್ಷೆ ಫಲಿತಾಂಶ ದಿನಾಂಕ: ನವೆಂಬರ್ 2023

ಮುಖ್ಯ ಪರೀಕ್ಷೆಯ ಕಾಲ್ ಲೆಟರ್ ಡೌನ್ಲೋಡ್ ಮಾಡಿ: ನವೆಂಬರ್ ಅಥವಾ ಡಿಸೆಂಬರ್ 2023

ಮುಖ್ಯ ಪರೀಕ್ಷೆ ದಿನಾಂಕ: ಡಿಸೆಂಬರ್ 2023 ಅಥವಾ ಜನವರಿ 2024

ಮುಖ್ಯ ಪರೀಕ್ಷೆಯ ಫಲಿತಾಂಶ ದಿನಾಂಕ: ಡಿಸೆಂಬರ್ 2023 ಅಥವಾ ಜನವರಿ 2024

ಸಂದರ್ಶನದ ದಿನಾಂಕ: ಜನವರಿ ಅಥವಾ ಫೆಬ್ರವರಿ 2024

ಅಂತಿಮ ಫಲಿತಾಂಶ ಪ್ರಕಟಣೆ ದಿನಾಂಕ: ಫೆಬ್ರವರಿ ಅಥವಾ ಮಾರ್ಚ್ 2024

ಅಧಿಸೂಚನೆಗಾಗಿ ಕ್ಲಿಕ್ ಮಾಡಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...