alex Certify JOB ALERT : ರಾಜ್ಯದಲ್ಲಿ 5,980 ಡಾಟಾ ಎಂಟ್ರಿ ಆಪರೇಟರ್ ಗಳ ನೇರ ನೇಮಕಾತಿ, ಅರ್ಜಿ ಸಲ್ಲಿಸಲು ರೆಡಿಯಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ರಾಜ್ಯದಲ್ಲಿ 5,980 ಡಾಟಾ ಎಂಟ್ರಿ ಆಪರೇಟರ್ ಗಳ ನೇರ ನೇಮಕಾತಿ, ಅರ್ಜಿ ಸಲ್ಲಿಸಲು ರೆಡಿಯಾಗಿ

ಬೆಂಗಳೂರು : ಗ್ರಾ.ಪಂಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಶೀಘ್ರದಲ್ಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ.

ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೂ ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬರಂತೆ ಒಟ್ಟು 5,980 ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಸೂಚನೆ ನೀಡಿದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ PUC ಉತ್ತೀರ್ಣರಾಗಿರಬೇಕು ಮತ್ತು ಕಂಪ್ಯೂಟರ್ ಶಿಕ್ಷಣದ ಸರ್ಟಿಫಿಕೇಟ್ ಕೂಡ ಹೊಂದಿರಬೇಕು. ದ್ವಿತೀಯ PUC ಅರ್ಹತೆಯ ಅಂಕಗಳು ಹಾಗೂ ಕಂಪ್ಯೂಟರ್ ತರಬೇತಿ ಸರ್ಟಿಫಿಕೇಟ್ ಗಳನ್ನು ಆಧರಿಸಿ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ಆಯ್ಕೆ ಆದವರನ್ನು ನೇಮಕ ಮಾಡಲಾಗುತ್ತದೆ. ಆಯ್ಕೆಯಾದ ನೌಕರರಿಗೆ ಪ್ರತಿ ತಿಂಗಳು 16,738 ರೂ. ವೇತನ ನೀಡಲು ಸೂಚನೆ ನೀಡಲಾಗಿದೆ. ಅರ್ಜಿ ಸ್ವೀಕಾರ ಮಾಡುವ ದಿನಾಂಕದ ಬಗ್ಗೆ ಇನ್ನೂ ಸಹ ನಿಖರವಾಗಿಲ್ಲ.

ಡಾಟಾ ಎಂಟ್ರಿ ಆಪರೇಟರ್ ಗಳ ನೇರ ನೇಮಕಾತಿಗೆ ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲೆಯನ್ನು ಒಂದು ಜೇಷ್ಠತಾ ಘಟಕವೆಂದು ಪರಿಗಣಿಸಿ ಉಲ್ಲೇಖ (1) ರಲ್ಲಿ ನಿರ್ದೇಶಿಸಿರುವಂತೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯ ಸಮಿತಿಯಲ್ಲಿ ಆಯ್ಕೆ ಮಾಡಿಕೊಳ್ಳತಕ್ಕದ್ದು ಹಾಗೂ ಸದರಿ ಹುದ್ದೆಗೆ ಆಯ್ಕೆಯಾದ ನೌಕರರಿಗೆ ಬಾಪೂಜಿ ಸೇವಾ ಕೇಂದ್ರದಲ್ಲಿ ಸಂಗ್ರಹವಾಗುವ ಮೊತ್ತದಿಂದ ವೇತನವನ್ನು ಪಾವತಿಸಲು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರು ಸೂಚನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...