ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರ ವಿವಿಧ ಮಹಾನಗರ ಪಾಲಿಕೆಗಳಿಗೆ ಹೊಸದಾಗಿ 1433 ಹುದ್ದೆಗಳನ್ನು ಮಂಜೂರು ಮಾಡಿ ನೇಮಕಾತಿ ಮಾಡಿಕೊಳ್ಳಲು ಒಪ್ಪಿಗೆ ನೀಡಿದೆ.
ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ (ಮಹಾನಗರ ಪಾಲಿಕೆ-2) ಆದೇಶ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೊರತುಪಡಿಸಿ ಉಳಿದ ಮಹಾನಗರ ಪಾಲಿಕೆಗಳಿಗೆ ಪೌರ ಕಾರ್ಮಿಕರ ನೇಮಕಾತಿ ನಡೆಯಲಿದೆ.
ರಾಜ್ಯದ ವಿವಿಧ ಮಹಾನಗರ ಪಾಲಿಕೆಗಳಲ್ಲಿ ನೇರಪಾವತಿ, ದಿನಗೂಲಿ, ಕ್ಷೇಮಾಭಿವೃದ್ಧಿ ಅಧಿನಿಯಮ, ಸಮಾನ ಕೆಲಸಕ್ಕೆ ಸಮಾನ ವೇತನದಡಿ, ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಒಟ್ಟು 1433 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ಸೃಜಿಸಿದ್ದು, ಈ ಹುದ್ದೆಗಳ ನೇಮಕಾತಿಗಾಗಿ ಇರುವ ವಯೋಮಿತಿಯನ್ನು 55 ವರ್ಷಕ್ಕೆ ಹೆಚ್ಚಿಸಲಾಗಿದೆ.
1433 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಬೇಕಾದರೆ ಸಮತಳ ಮೀಸಲಾತಿಯಡಿ ಕನ್ನಡ ಮಾಧ್ಯಮ, ಗ್ರಾಮೀಣ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆಂದು ಮೀಸಲಾದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದ ಪಕ್ಷದಲ್ಲಿ ಈ ಮೀಸಲಾದ ಹುದ್ದೆಗಳಿಗೆ ಉಳಿದ ಆರ್ಹರಿರುವ ಪರಿಗಣಿಸಲಾಗುವುದು.