ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ 1,500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1,500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು. ಜೊತೆಗೆ 357 ಸರ್ವೆಯರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಇನ್ನೂ 590 ಹುದ್ದೆಗಳ ನೇಮಕಾತಿಗೆ ಸಂಪುಟ ಸಭೆಯಲ್ಲಿ ಅನುಮತಿ ಪಡೆಯಲಾಗುವುದು ಎಂದು ಹೇಳಿದ್ದಾರೆ.
ನೇಮಕಾತಿಯಾದ 750 ಸರ್ವೆಯರ್ ಗಳಿಗೆ ತರಬೇತಿ ಕೊಡಲಾಗಿದೆ. ಅವರೂ ಕಾರ್ಯಾರಂಭ ಮಾಡಲಿದ್ದಾರೆ. ಇದರಿಂದ ಕಂದಾಯ ಜಮೀನುಗಳ ಸಮೀಕ್ಷೆ ಕಾರ್ಯ ಸುಲಭವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.