alex Certify JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘KEA’ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘KEA’ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್) ಹಾಗೂ 14 ‘ಸಿ’ ಗ್ರೂಪ್ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು.

ಶೈಕ್ಷಣಿಕ ವಿದ್ಯಾರ್ಹತೆ

ಸಹಾಯಕ ಇಂಜಿನಿಯರ್ ( ಸಿವಿಲ್)ಗೆ ಬಿಇ, ಬಿಟೆಕ್ ಇಂಜಿನಿಯರಿಂಗ್ ಪದವಿಯನ್ನು ಸಿವಿಲ್ ವಿಭಾಗದಲ್ಲಿ ಪಡೆದಿರಬೇಕು. ಆದರೆ ಅಂಚೆ ಮತ್ತು ದೂರು ಶಿಕ್ಷಣ ಮುಖಾಂತರ ಪಡೆದ ತಾಂತ್ರಿಕ ಪದವಿಗಳನ್ನು ನೇಮಕಾತಿಗೆ ಪರಿಗಣಿಸೋದಿಲ್ಲ.

ಅರ್ಜಿ ಸಲ್ಲಿಕೆ ವಿಧಾನ

ಅರ್ಹ ಅಭ್ಯರ್ಥಿಗಳು ಕೆಇಎ ಅಧಿಕೃತ ಜಾಲತಾಣ http://kea.kar.nic.in ನಲ್ಲಿ ಆನ್ ಲೈನ್ ಮೂಲಕ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕಗಳು

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 10-02-2024ರಿಂದ ಪ್ರಾರಂಭವಾಗಲಿದ್ದು, ಅರ್ಜಿ ಸಲ್ಲಿಸಲು 10-03-2024 ಕೊನೆಯ ದಿನವಾಗಿದೆ. ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ 14-03-2024 ಆಗಿರುತ್ತದೆ.

ವಯೋಮಿತಿ

ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38, ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.

ಅರ್ಜಿ ಶುಲ್ಕ

ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳಾದಂತ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ.750.ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ-1, ಮಾಜಿ ಸೈನಿಕರು ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ ರೂ.500 ಶುಲ್ಕ ವಿಧಿಸಲಾಗಿದೆ.

ಆಯ್ಕೆ ವಿಧಾನ

ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಪ್ ಲೈನ್ ಒಎಂ ಆರ್ ಮಾದರಿ ಮೂಲಕ ಪರೀಕ್ಷೆ ನಡೆಸಲಾಗುತ್ತದೆ. ಈ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದಂತ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಸೂಚನೆ: ಅಂಚೆ ಮತ್ತು ದೂರ ಶಿಕ್ಷಣ ಮುಖಾಂತರ ಪಡೆದ ತಾಂತ್ರಿಕ ಪದವಿಗಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.)ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿ ಪಡೆದಿರಬೇಕು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...