alex Certify JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 1500 ಗ್ರಾಮ ಲೆಕ್ಕಾಧಿಕಾರಿ, 357 ಸರ್ವೇಯರ್ ಹುದ್ದೆಗಳ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 1500 ಗ್ರಾಮ ಲೆಕ್ಕಾಧಿಕಾರಿ, 357 ಸರ್ವೇಯರ್ ಹುದ್ದೆಗಳ ನೇಮಕಾತಿ

ಬೆಂಗಳೂರು : ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ 1500 ಗ್ರಾಮ ಲೆಕ್ಕಾಧಿಕಾರಿ, 357 ಸರ್ವೇಯರ್ ಹುದ್ದೆಗಳ ನೇಮಕಾತಿ ನಡೆಯಲಿದೆ.

ಹೌದು. ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1,500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು. ಜೊತೆಗೆ 357 ಸರ್ವೆಯರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೂಡ ನಡೆಯಲಿದೆ. ಇನ್ನೂ 590 ಹುದ್ದೆಗಳ ನೇಮಕಾತಿಗೆ ಸಂಪುಟ ಸಭೆಯಲ್ಲಿ ಅನುಮತಿ ಪಡೆಯಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುತ್ತದೆ. ಇದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುತ್ತದೆ, ನೇಮಕಗೊಂಡ 750 ಸರ್ವೆಯರ್ಗಳಿಗೆ ತರಬೇತಿ ಕೊಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಅರ್ಜಿ ಸಲ್ಲಿಸುವ ಸಂಬಂಧ ನೀವು ತಯಾರಿ ಮಾಡಿಕೊಳ್ಳಬಹುದಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...