alex Certify ಉದ್ಯೋಗ ವಾರ್ತೆ : ‘KEA’ ಯಿಂದ 2500 ‘BMTC’ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗ ವಾರ್ತೆ : ‘KEA’ ಯಿಂದ 2500 ‘BMTC’ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ (ಕಂಡಕ್ಟರ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 2500 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಮಿಕ್ಕುಳಿದ ವೃಂದ : 2286
ಸ್ಥಳೀಯ ವೃಂದ : 214

ಶೈಕ್ಷಣಿಕ ಅರ್ಹತೆ : ಪಿಯುಸಿ (ಆರ್ಟ್ಸ್/ಕಾಮರ್ಸ್/ಸೈನ್ಸ್) ಅಥವಾ 10+2 ICSE/ CBSE ಅಥವಾ ತಾಂತ್ರಿಕ ಶಿಕ್ಷಣ ಇಲಾಖೆಯಿಂದ 3 ವರ್ಷಗಳ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರತಕ್ಕದ್ದು ಜೊತೆಗೆ ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್ ಅನ್ನು ಹೊಂದಿರತಕ್ಕದ್ದು.

ಪ್ರಮುಖ ದಿನಾಂಕ

ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 10-03-2024
ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10-04-2024
ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ : 13-04-2024

ಅರ್ಜಿ ಸಲ್ಲಿಸುವುದು ಹೇಗೆ..?

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ http://kea.kar.nic.in ನಲ್ಲಿ ಮಾರ್ಚ್ 10 ರಂದು ತೋರಿಸುವ ಲಿಂಕ್ ಅನ್ನು ಆಯ್ಕೆ ಮಾಡಿ, ಆನ್ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು.

ಸಂಸ್ಥೆಯ ಹೆಸರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ವೆಬ್ಸೈಟ್ ವಿಳಾಸ
https://mybmtc.karnataka.gov.in/english

ವಯೋಮಿತಿ

ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವ ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಮಾಜಿ ಸೈನಿಕ, ಇಲಾಖಾ ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,660 – ರೂ. 25,300 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ಹೇಗೆ..?

ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ಆಫ್ ಲೈನ್-ಓಎಂಆರ್ ಮಾದರಿ ಮೂಲಕ ನಡೆಸಲಾಗುವುದು.ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಪಿಡಿಎಫ್ ಕಾಫಿ ವೀಕ್ಷಿಸಬಹುದಾಗಿದೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...