ಶಿಶು ಅಭಿವೃದ್ದಿ ಯೋಜನೆಯಡಿ ಸಂಡೂರು ತಾಲ್ಲೂಕಿನ ಪುರಸಭೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ 28 ಅಂಗನವಾಡಿ ಕಾರ್ಯಕರ್ತೆಯರು ಮತ್ತು 79 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ, ಲಿಂಗತ್ವ, ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಅರ್ಹರಾಗಿದ್ದು, ಆಸಕ್ತ ಅಭ್ಯರ್ಥಿಗಳು ಸೆ.17ರೊಳಗಾಗಿ ಅರ್ಜಿ ಸಲ್ಲಿಸಬಹುದು.
*ಬೇಕಾದ ದಾಖಲೆಗಳು:*
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ, ಯೋಜನಾ ನಿರಾಶ್ರಿತರ ಬಗ್ಗೆ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ರೇಷನ್ ಕಾರ್ಡ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ, ಎಲ್ಲಾ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿ ಸಲ್ಲಿಸಬೇಕು.
ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ಇರುವ ಎಸ್ಎಸ್ಎಲ್ಸಿ ಅಂಕಪಟ್ಟಿ, ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ, ತಹಶೀಲ್ದಾದಾರರು ಅಥವಾ ಉಪ ತಹಶೀಲ್ದಾದಾರರಿಂದ ಪಡೆದ ಮೂರು (3) ವಷÀðದೊಳಗಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ, ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ).
ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ), ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು), ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ, ಇಲಾಖೆಯ ಸುಧಾರಣಾ ಸಂಸ್ಥೆ, ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು ಕನಿಷ್ಠ 03 ವರ್ಷ ಸಂಸ್ಥೆಯಲ್ಲಿರಬೇಕು.
*ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ವಿದ್ಯಾರ್ಹತೆ:*
ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್ಎಸ್ಎಲ್ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
*ಅಂಗನವಾಡಿ ಸಹಾಯಕಿ ವಿದ್ಯಾರ್ಹತೆ:*
ಅಂಗನವಾಡಿ ಸಹಾಯಕಿ ಹುದ್ದೆಗೆ ಎಸ್ಎಸ್ಎಲ್ಸಿ ವಿದ್ಯಾರ್ಹತೆ ಹೊಂದಿದ್ದು, ತತ್ಸಮಾನ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು.
*ಸೂಚನೆ:*
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿಗಳನ್ನು ಅನ್ಲೈನ್ ಮೂಲಕವೇ ಮಾತ್ರ ಸಲ್ಲಿಸಬೇಕು. ಇತರೇ ಯಾವುದೇ ಮೂಲದಿಂದ ಸಲ್ಲಿಸಲು ಅವಕಾಶವಿರುವುದಿಲ್ಲ ಮತ್ತು ಪರಿಗಣಿಸಲಾಗುವುದಿಲ್ಲ.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡಿ, ಕಡ್ಡಾಯವಾಗಿ ಅವಶ್ಯ ಇರುವ ಮೂಲ ದಾಖಲೆಗಳನ್ನು ಸ್ಪಷ್ಟವಾಗಿ ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು.
ಆನ್ಲೈನ್ ಮೂಲಕವೇ ಎಲ್ಲಾ ಅಗತ್ಯ ದಾಖಲಾತಿಗಳನ್ನು ಸಲ್ಲಿಸುವುದು, ತದನಂತರ ಸಲ್ಲಿಸುವ ದಾಖಲಾತಿಗಳನ್ನು ಪರಿಗಣಿಸುವುದಿಲ್ಲ. ಆನ್ಲೈನ್ ಅರ್ಜಿಯೊಂದಿಗೆ ಯಾವುದೇ ಅಗತ್ಯ ದಾಖಲೆಯನ್ನು ಸಲ್ಲಿಸದೇ ಇದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಮತ್ತು ಆಸ್ಪಷ್ಟ ಅಥವಾ ಅಪೂರ್ಣ ದಾಖಲೆಗಳನ್ನು ಪರಿಗಣಿಸುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಸಂಡೂರಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅಥವಾ ದೂ.08395-261156 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.