ಬೆಂಗಳೂರು : ರಾಜ್ಯ ಸರ್ಕಾರವು ಶೀಘ್ರವೇ ರಾಜ್ಯದಲ್ಲಿ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಿದ್ದು, ಅರ್ಜಿ ಸಲ್ಲಿಸಲು ಆಕಾಂಕ್ಷಿಗಳು ಸಿದ್ದತೆ ಮಾಡಿಕೊಳ್ಳಬಹುದಾಗಿದೆ.
1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕ ಪ್ರಕ್ರಿಯೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಹುದ್ದೆಗಳನ್ನು ಈ ಬಾರಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡುವ ಹಿನ್ನೆಲೆಯಲ್ಲಿ ಕೆಲವು ಪ್ರಕ್ರಿಯೆಗಳು ಬಾಕಿ ಇದ್ದು, ಅವುಗಳನ್ನು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇನ್ನೊಂದು ತಿಂಗಳುಗಳ ಒಳಗಾಗಿ ಸದರಿ ಹುದ್ದೆಗಳಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗುತ್ತದೆ. ಮಾರ್ಚ್ 20 ರೊಳಗೆ ಅಧಿಸೂಚನೆ ಪ್ರಕಟವಾಗಲಿದೆ ಎಂದು ಹೇಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಶಿಕ್ಷಣವನ್ನು ಅಂಗೀಕೃತ ಶಿಕ್ಷಣ ಸಂಸ್ಥೆಗಳಿಂದ ಪಡೆದಿರಬೇಕು.
ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಖಾಲಿಯಿರುವ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇರ ನೇಮಕಾತಿ ಮಾಡುವ ಸಂಬಂಧ ಆರ್ಥಿಕ ಇಲಾಖೆಯು 2023-24, 2024-25 ಹಾಗೂ 2025-26 ನೇ ಸಾಲಿನ ವಾರ್ಷಿಕವಾಗಿ 500 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಯು ಸಹಮತಿ ನೀಡಿರುತ್ತದೆ.ಎಲ್ಲ ಜಿಲ್ಲೆಗಳಲ್ಲಿ ಮಂಜೂರಾದ ಹುದ್ದೆಗಳು, ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಹುದ್ದೆಗಳು ಹಾಗೂ ಖಾಲಿ ಹುದ್ದೆಗಳಿಗನುಗುಣವಾಗಿ ಪ್ರಸಕ್ತ ಖಾಲಿಯಿರುವ 1820 ಹುದ್ದೆಗಳ ಪೈಕಿ 1000 ಹುದ್ದೆಗಳನ್ನು ನೇರನೇಮಕಾತಿಯಡಿ ಭರ್ತಿಮಾಡಿಕೊಳ್ಳಲು ಉದ್ದೇಶಿಸಲಾಗಿರುತ್ತದೆ.
ಅರ್ಹತೆಗಳು
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.
– ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ.
– ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
ವೇತನ ಎಷ್ಟು..?
ರೂ.21000-42000.