ಬೆಂಗಳೂರು : ಫೆ.19, 20 ರಂದು ಬೆಂಗಳೂರಿನಲ್ಲಿ ಸರ್ಕಾರದಿಂದ ರಾಜ್ಯಮಟ್ಟದ ಉದ್ಯೋಗಮೇಳ ಆಯೋಜನೆ ಮಾಡಲು ನಿರ್ಧರಿಸಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ.
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ- 2024 “ಯುವ ಸಮೃದ್ಧಿ ಸಮ್ಮೇಳನ”ವನ್ನು ಫೆ. 19 ಮತ್ತು 20 ಫೆಬ್ರವರಿ 2024 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಆಸಕ್ತ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಬಹುದಾಗಿದೆ.
ನೋಂದಣಿ ಹೇಗೆ..?
ಆಸಕ್ತ ಉದ್ಯೋಗಾಕಾಂಕ್ಷಿಗಳು ಆನ್ಲೈನ್ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಲು ಕರೆ ನೀಡಲಾಗಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು https://skillconnect.kaushalkar.com/ ವೆಬ್ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬೇಕಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ 1800 599 9918 ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನೋಂದಣಿ ಮಾಡುವ ಹಂತಗಳು
1) ಮೊದಲು https://skillconnect.kaushalkar.com/new ಭೇಟಿ ನೀಡಿ
ಹಂತ 2 : ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ
ಹಂತ 3 : ಉದ್ಯೋಗ ಮೇಳ ಕ್ಲಿಕ್ ಮಾಡಿ
ಹಂತ 4: ಅಭ್ಯರ್ಥಿ ನೋಂದಣಿ ಮೇಲೆ ಕ್ಲಿಕ್ ಮಾಡಿ
ಹಂತ 5 : ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಿ
ಉದ್ಯೋಗ ಮೇಳ ನಡೆಯುವ ದಿನಾಂಕ : ಫೆ 19 ಹಾಗೂ ಫೆ.20
ಸ್ಥಳ : ಅರಮನೆ ಮೈದಾನ, ಬೆಂಗಳೂರು
ಯುವನಿಧಿ’ ಯೋಜನೆ ಜಾರಿಗೆ ತಂದ ಬೆನ್ನಲ್ಲೇ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲು ಈ ಕ್ರಮ ಕೈಗೊಂಡಿದೆ. ಯುವನಿಧಿ ಯೋಜನೆ ಜಾರಿ ಬೆನ್ನಲ್ಲೇ ರಾಜ್ಯ ಸರ್ಕಾರ ಬೃಹತ್ ಮಟ್ಟದ ಉದ್ಯೋಗ ಮೇಳ ನಡೆಸಲು ತೀರ್ಮಾನಿಸಿದೆ.
https://twitter.com/Skill_Karnataka/status/1752381835517235610?ref_src=twsrc%5Etfw%7Ctwcamp%5Etweetembed%7Ctwterm%5E1752381835517235610%7Ctwgr%5E52240252411b7a4dc5bc3e8d0ec61d109ba4cb28%7Ctwcon%5Es1_&ref_url=https%3A%2F%2Fkannadadunia.com%2Flive-news%2Fgood-news-for-job-seekers-state-level-job-fair-is-organized-on-february-19-20%2F