alex Certify ಪದವೀಧರರಿಗೆ ಶುಭ ಸುದ್ದಿ: DFCCIL ನಲ್ಲಿ 1074 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪದವೀಧರರಿಗೆ ಶುಭ ಸುದ್ದಿ: DFCCIL ನಲ್ಲಿ 1074 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೋರೇಶನ್ ಆಫ್ ಇಂಡಿಯಾ(ಡಿಎಫ್ಸಿಸಿಐಎಲ್) ನಲ್ಲಿ 1074 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜ್ಯೂನಿಯರ್ ಮ್ಯಾನೇಜರ್, ಎಕ್ಸಿಕ್ಯುಟಿವ್ ಮತ್ತು ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲಿದ್ದು, ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

ಪದವಿ, ಎಂಬಿಎ/ಪಿಜಿಡಿಬಿಎ/ಪಿಜಿಡಿಬಿಎಂ/ಪಿಜಿಡಿಎಂ, ಡಿಪ್ಲೋಮಾ, ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮೇ 23,2021ರೊಳಗೆ ಅರ್ಜಿ ಸಲ್ಲಿಸಬಹುದು.

ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿ ನಿಗದಿಪಡಿಸಿದ್ದು, ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಅಭ್ಯರ್ಥಿಗಳನ್ನು ಕಂಪ್ಯೂಟರ್ ಬೇಸ್ಡ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಜ್ಯೂನಿಯರ್ ಮ್ಯಾನೇಜರ್ ಹುದ್ದೆಗಳಿಗೆ 1,000 ರೂ., ಎಕ್ಸಿಕ್ಯುಟಿವ್ ಹುದ್ದೆಗಳಿಗೆ 900 ರೂ. ಮತ್ತು ಜ್ಯೂ. ಎಕ್ಸಿಕ್ಯುಟಿವ್ ಹುದ್ದೆಗಳಿಗೆ 700 ರೂ. ಅರ್ಜಿ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿದೆ. ಆಸಕ್ತ ಅಭ್ಯರ್ಥಿಗಳು https://dfccil.com/ ಗೆ ಭೇಟಿ ನೀಡಿ. ಮಾಹಿತಿ ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...