ರಾಯಚೂರು: ಇಲ್ಲಿಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜಿಲ್ಲೆಯ ಸಿರವಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇದೇ ಜು. 16 ರಂದು ವಿವಿಧ ಹುದ್ದೆಗಳಿಗೆ ನೇರವಾಗಿ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ವಿವಿಧ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
7 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ. ಅಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತದೆ.
ಅರ್ಹತೆಗಳು:
ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಎಲ್ಲಾ ಪದವೀಧರ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. 18 ರಿಂದ 35 ವರ್ಷಗಳವರೆಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಉದ್ಯೋಗವಕಾಶಕ್ಕಾಗಿ ತಮ್ಮ ವಿದ್ಯಾರ್ಹತೆಯ ಅಂಕ ಪಟ್ಟಿಗಳ ಜೆರಾಕ್ಸ್ ಪ್ರತಿಗಳು ಮತ್ತು ತಮ್ಮ ಬಯೋಡಾಟಾ, ಆಧಾರ್ ಕಾರ್ಡ್ ಪ್ರತಿ ಹಾಗೂ ಭಾವಚಿತ್ರಗಳೊಂದಿಗೆ ಭಾಗವಹಿಸಬಹುದಾಗಿದೆ. ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ, ಬದಲಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಈ ಸಂದರ್ಶನಕ್ಕೆ ಹಾಜರಾಗಬಹುದಾಗಿರುತ್ತದೆ.
ಉದ್ಯೋಗ ನೋಂದಣಿ ಮಾಡಿಸುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಮೂಲ ಅಂಕಪಟ್ಟಿಗಳು, ವರ್ಗಾವಣೆ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಮತ್ತು ಝೆರಾಕ್ಸ್ ಪ್ರತಿಯನ್ನು ತರಬೇಕಾಗಿರುತ್ತದೆ. ಅಲ್ಲದೆ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕೋವಿಡ್-19ರ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08532-231684, 7795195171, 8296483501, 7411796987ಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.