ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್ವ್ಯೂವ್ ಅನ್ನು ನವೆಂಬರ್ 29 ರಂದು ಬೆಳಗ್ಗೆ 10.30 ರಿಂದ 2.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಈ ವಾಕ್ ಇನ್ ಇಂಟರ್ವ್ಯೂವನಲ್ಲಿ ಕನೆಕ್ಟ್ ಸಂಸ್ಥೆ ಧಾರವಾಡ ಇವರಿಂದ ಎನ್.ಟಿ.ಟಿ.ಎಫ್.(ನೀಮ್ ಸ್ಕೀಮ್) ಟೋಯಟಾ ಕಿರ್ಲೋಸ್ಕರ್ ಮೋಟರ್ಸ್ ಪ್ರೈ.ಲಿ ಬೆಂಗಳೂರು ಬಿಡದಿ(NTTF (NEEM SCHEME) Toyota Kirloskar Motors Pvt. Ltd Bangalore Bidadi) ಇವರು ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದು, ಈ ಇಂಟರ್ವ್ಯೂವ್ ನಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇಲ್ಲದೇ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.
ಐಟಿಐ, ಪಿಯುಸಿ ಸೈನ್ಸ್ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ವಾಕ್ ಇನ್ ಇಂಟರ್ವ್ಯೂವ್ದಲ್ಲಿ ಭಾಗವಹಿಸುವ ಆಸಕ್ತಿಯುಳ್ಳ 18 ರಿಂದ 24 ವರ್ಷದೊಳಗಿನ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ (ರಿಜುಮ್) ಹಾಗೂ ಪಾಸ್ ಪೋಟ್ ಅಳತೆಯ ಭಾವಚಿತ್ರಗಳೊಂದಿಗೆ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳತ ಭವನ, ಮೊದಲನೇ ಮಹಡಿ, ಕೊಪ್ಪಳ ದೂ.ಸಂ: 08539-220859, ಮೊ.ಸಂ: 9880750997 ಸಂಪರ್ಕಿಸಬಹುದು. ಅರ್ಹ ಅಭ್ಯರ್ಥಿಗಳು ಈ ವಾಕ್ ಇನ್ ಇಂಟರ್ವ್ಯೂವ್ ದಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.