alex Certify ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಪದವಿ, ಪಿಜಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಪದವಿ, ಪಿಜಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜುಲೈ 22ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಬೆಂಗಳೂರಿನ ಮಲ್ಲೇಶ್ವರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮ್ಯಾಜಿಕ್ ಇಂಡಿಯಾ ಫೌಂಡೇಶನ್, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ಮಲ್ಲೇಶ್ವರಂ 18ನೇ ಕ್ರಾಸ್ ನಲ್ಲಿರುವ ಸರ್ಕಾರಿ ಕಾಲೇಜಿನಲ್ಲಿ ಜುಲೈ 22 ರಂದು ಬೆಳಿಗ್ಗೆ 10 ಗಂಟೆಯಿಂದ ಉದ್ಯೋಗ ಮೇಳ ಆರಂಭವಾಗಲಿದೆ.

ಎಸ್ಎಸ್ಎಲ್ಸಿ ಉತ್ತೀರ್ಣ, ಅನುತ್ತೀರ್ಣ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾದ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಮಾಹಿತಿಗಾಗಿ ಕೆಂಪೇಗೌಡ ರಸ್ತೆಯ ಏಷ್ಯಾಟಿಕ್ ಕಟ್ಟಡದ ಎರಡನೇ ಮಹಡಿಯಲ್ಲಿರುವ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...