ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ವತಿಯಿಂದ ಸೆ.23 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.
ವಾಕ್-ಇನ್-ಇಂಟವ್ರ್ಯೂವ್ ನಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಪಿಯುಸಿ, ಐಟಿಐ, ಡಿಪ್ಲೊಮೊ, ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಪೂರೈಸಿದ ಅಭ್ಯರ್ಥಿಗಳನ್ನು ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಸ್ವ ವಿವರ, ಆಧಾರ್ ಕಾರ್ಡ್ ನೊಂದಿಗೆ ವಾಕ್ ಇನ್ ಇಂಟವ್ರ್ಯೂವ್ ನಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ: 08192-259446, 6361550016, 7406323294 ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.