ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಡಿಸೆಂಬರ್ 13 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದÀಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ (ಕೊಠಡಿ.ಸಂ.51)ದಲ್ಲಿ ನೇರ ಆಯ್ಕೆ ಸಂದರ್ಶನ ಆಯೋಜಿಸಲಾಗಿದೆ.
ನೇರ ಆಯ್ಕೆ ಸಂದರ್ಶನದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಎಂ.ಎಸ್ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತ ಅಭ್ಯರ್ಥಿಗಳು ಕನಿಷ್ಠ 3 ಸೆಟ್ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ನೊಂದಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ. 7483808321, 08192-259446 ಸಂಪರ್ಕಿಸಲು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.