ಕೊಪ್ಪಳ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೊಪ್ಪಳ, ಸಂಜೀವಿನಿ ಎನ್‌ಆರ್‌ಎಲ್‌ಎಂ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ (ಖಾಗ್ರಾ) ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್ 21 ರಂದು ನಗರದ ಶ್ರೀ ಶಿವಶಾಂತವೀರ ಮಂಗಲ ಭವನದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿರುವ ಉದ್ಯೋಗ ಮೇಳದಲ್ಲಿ ಕೈಗಾರಿಕೆ, ಕೃಷಿ, ಸಾರಿಗೆ, ಫಾರ್ಮಾ, ಬ್ಯಾಕಿಂಗ್, ಫೈನಾನ್ಸಿಯಲ್ಸ್ ಗೆ ಸಂಬAಧಿಸಿದ ವಿವಿಧ ಕ್ಷೇತ್ರಗಳನ್ನೊಳಗೊಂಡ ಸುಮಾರು 50 ಕಂಪನಿಗಳು ಭಾಗವಹಿಸಲಿದ್ದು, 1100 ಜನರಿಗೆ ಉದ್ಯೋಗ ಕಲ್ಪಿಸಲು ಉದ್ದೇಶಿಸಲಾಗಿದೆ.
ಮೇಳದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯಿಂದ ಪದವಿ ವಿದ್ಯಾರ್ಹತೆವರೆಗಿನ ಉದ್ಯೋಕಾಂಕ್ಷಿಗಳು ದಾಖಲಾತಿಗಳೊಂದಿಗೆ ಭಾಗವಹಿಸಬಹುದಾಗಿದೆ. ಉದ್ಯೋಗಾಕಾಂಕ್ಷಿಗಳು ನೋಂದಣಿಗಾಗಿ ಇಲಾಖೆಯಿಂದ ಸೃಜಿಸಲಾಗಿರುವ ಗೂಗಲ್ ಫಾರಂ https://forms.gle/m11qzC9PZ6JsDPfs5 ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯ ಮಿಷನ್, ಕೊಪ್ಪಳ ಈ ಕಚೇರಿಗೆ ಅಥವಾ ಮೊ.ಸಂ: 7618731311, 9972778248, 9743839859 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.