ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಎನ್.ಸಿ.ಎಸ್.ಪಿ ಅಡಿಯಲ್ಲಿ ಉದ್ಯೋಗ ಮೇಳವನ್ನು ಜನವರಿ 31 ರಂದು ಬೆಳಿಗ್ಗೆ 10.30 ರಿಂದ 4 ಗಂಟೆಯವರೆಗೆ ನಗರದ ಅಶೊಕ ಸರ್ಕಲ್ ಹತ್ತಿರವಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಈ ಎನ್.ಸಿ.ಎಸ್.ಪಿ ಉದ್ಯೋಗ ಮೇಳದಲ್ಲಿ 10 ಕ್ಕಿಂತ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು, ಈ ಕಂಪನಿಯವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.
ಆದ್ದರಿಂದ ಎಸ್.ಎಸ್.ಎಲ್.ಸಿ., ಪಿಯುಸಿ, ಐ.ಟಿ.ಐ., ಡಿಪ್ಲೋಮಾ ಹಾಗೂ ಯಾವುದೇ ಪದವಿಯ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಎನ್.ಸಿ.ಎಸ್.ಪಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಆಸಕ್ತಿಯುಳ್ಳ ಯುವಕ ಮತ್ತು ಯುವತಿಯರಿಗೆ ಮಾತ್ರವಾಗಿದ್ದು, 18 ರಿಂದ 40 ವರ್ಷದ ವರೆಗಿನ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ ಕಾರ್ಡಿನ ಪ್ರತಿ, 05 ಬಯೋಡಾಟಾ(ರೆಜೂಮ್) ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಈ ಉದ್ಯೋಗ ಮೇಳದದಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಅಥವಾ ದೂ.ಸಂ: 08539-220859, ಮೊ.ಸಂ: 9353515518, 9880758997 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.