ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸೆ. 23 ರಂದು ಬೆಳಿಗ್ಗೆ 10-30 ರಿಂದ 03-30 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಾಕ್ ಇನ್ ಇಂಟರ್ವ್ಯೂವ್ ಆಯೋಜಿಸಲಾಗಿದೆ.
ವಾಕ್ ಇನ್ ಇಂಟರ್ವ್ಯೂವ್ ನಲ್ಲಿ ಎಲ್.ಎನ್.ಟಿ ಫೈನಾನ್ಸ್ ಲಿಮಿಟೆಡ್ ಬೆಂಗಳೂರು(ಡಿ.ಎಲ್ & ಬೈಕ್ ಕಡ್ಡಾಯ) ಮತ್ತು ನವಭಾರತ ಫರ್ಟಿಲೈಸರ್ ಹುಬ್ಬಳ್ಳಿ ಅವರು ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಯಾವುದೇ ಪದವಿ ಪೂರ್ಣಗೊಳಿಸಿದ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
ಅಭ್ಯರ್ಥಿಗಳು ಸ್ವವಿವರದ ಮಾಹಿತಿ, ಎಲ್ಲಾ ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ, ಮೊ.ಸಂ.: 9880758997, 08539-220859, 9353515518 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಮಿನಿ ಉದ್ಯೋಗ ಮೇಳ
ಹುಬ್ಬಳ್ಳಿ: ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಸೆಪ್ಟೆಂಬರ್ 23 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಇದರಲ್ಲಿ 5 ರಿಂದ 7 ಖಾಸಗಿ ರಂಗದ ಉದ್ಯೋಗದಾತರುಗಳು ಭಾಗವಹಿಸಿ ತಮ್ಮ ಸಂಸ್ಥೆಯಲ್ಲಿನ ವಿವಿಧ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೊಮಾ (ಮೆಕ್ಯಾನಿಕಲ್), ಬಿ.ಇ. (ಮೆಕ್ಯಾನಿಕಲ್), ಬಿ.ಬಿ.ಎ, ಎಮ್.ಬಿ.ಎ(ಎಚ್. ಆರ್), ಎಎನ್‌ಎಮ್ ಪ್ಯಾರಾ ಮೆಡಿಕಲ್ ಸರ್ಟಿಪಿಕೇಟ್ ಆಫ್ ನರ್ಸಿಂಗ್, ಜಿಎನ್‌ಎಮ್ ಬಿಎಸ್ಸಿ ನರ್ಸಿಂಗ್ ಹಾಗೂ ಯಾವುದೇ ಪದವೀಧರ, ಅಭ್ಯರ್ಥಿಗಳು 18 ರಿಂದ 35 ವಯಸ್ಸಿನವರು ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳು ತಮ್ಮ ಭಾವಚಿತ್ರ, ಆಧಾರಕಾರ್ಡ, ಬಯೋಡಾಟಾ (ರೆಸ್ಯುಮೆ) ಗಳ ಹೆಚ್ಚಿನ ಪ್ರತಿಗಳೊಂದಿಗೆ (ಕನಿಷ್ಟ 5 ಪ್ರತಿಗಳು) ತಮ್ಮ ಸ್ವಂತ ಖರ್ಚಿನಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ನವನಗರ ಹುಬ್ಬಳ್ಳಿ ಅಥವಾ ದೂರವಾಣಿ ಸಂಖ್ಯೆ 0836-2225288, 8105693234, 8453208555 ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.