alex Certify ಉದ್ಯೋಗಾವಕಾಶ: SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಇಲ್ಲಿದೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾವಕಾಶ: SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಇಲ್ಲಿದೆ ಗುಡ್ ನ್ಯೂಸ್

ಬಳ್ಳಾರಿ: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಮತ್ತು ಇಂಡೋ ಅಮೇರಿಕನ್ ಪದವಿ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಎನ್.ಸಿ.ಎಸ್. ಉದ್ಯೋಗ ಮೇಳವನ್ನು ಇದೇ ಜ.25 ರಂದು ಇಂಡೋ ಅಮೇರಿಕನ್ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಈ ಉದ್ಯೋಗ ಮೇಳದಲ್ಲಿ ಸುಮಾರು 15 ಕಂಪನಿಗಳು ಭಾಗವಹಿಸಲಿವೆ. ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ತುಂಬಲಿದ್ದಾರೆ. ಎಸ್ಸೆಸ್ಸೆಲ್ಸಿ ಗಿಂತ ಕಡಿಮೆ, ಎಸ್ಸೆಸ್ಸೆಲಿ ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಮುಂತಾದ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ಸ್ವಯಂ ವಿವರಗಳೊಂದಿಗೆ ಈ ಮೇಳದಲ್ಲಿ ಭಾಗವಹಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ.

ಈ ಉದ್ಯೋಗ ಮೇಳವು ಬೆಳಗ್ಗೆ 10 ರಿಂದ ಸಂಜೆ 4 ರವರೆಗ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವವರು ಕಡ್ಡಾಯ ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ.ಸಂ.9844444958/08392-273988 ಸಂಪರ್ಕಿಸಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...