ಮಡಿಕೇರಿ: ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್. ಡಿಡಿಯುಜಿಜಿಕೆವೈ ಯೋಜನೆಯಡಿ ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಗ್ರಾಮೀಣಾಭಿವೃದ್ಧಿ ಮಂತ್ರಾಲಯ(ಕೌಶಲ್ಯ) ನಿರ್ದೇಶನದಂತೆ ಏಪ್ರಿಲ್, 29 ರಂದು ನಗರದ ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐಕಾಲೇಜು)ದಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಉದ್ಯೋಗ ಮೇಳದಲ್ಲಿ ಹಲವು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದೆ. ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸಿ ತರಬೇತಿಗೆ ಆಯ್ಕೆ ಮಾಡಲಾಗುವುದು. ಆದ್ದರಿಂದ ಜಿಲ್ಲೆಯ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ ಯುವತಿಯರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಅವರು ಕೋರಿದ್ದಾರೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಂಜೀವಿನಿ ಎನ್‍ಆರ್‍ಎಲ್‍ಎಂ, ಡಿಡಿಯು-ಜಿಕೆವೈ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್, 29 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಇತರೇ ಯಾವುದೇ ಪದವಿ ಪಡೆದಿರಬೇಕು. 18 ರಿಂದ 35 ವರ್ಷದೊಳಗಿರಬೇಕು ಎಂದು ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ತಿಳಿಸಿದ್ದಾರೆ.