alex Certify ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಪ್ರತಿಷ್ಠಿತ ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಪ್ರತಿಷ್ಠಿತ ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ.27 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 08182-255293, 9380663606, 9482023412, 9535312531 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...