alex Certify ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಕೈಗಾರಿಕಾ ತರಬೇತಿ ಇಲಾಖೆಯಿಂದ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಕೈಗಾರಿಕಾ ತರಬೇತಿ ಇಲಾಖೆಯಿಂದ ಗುಡ್ ನ್ಯೂಸ್

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ ಅಡಿಯಲ್ಲಿ ಡಿಸೆಂಬರ್ 3 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ವರೆಗೆ ರಾಜಾಜಿನಗರದ ಎಂಇಐ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಉದ್ಯೋಗ ಮೇಳಕ್ಕೆ ಉಚಿತ ಪ್ರವೇಶ ಇದ್ದು, ನಿರುದ್ಯೋಗಿ ಯುವಕ, ಯುವತಿಯರು ಉದ್ಯೋಗ ಮೇಳದ ಸದುಪಯೋಗ ಪಡೆಯುವಂತೆ ಕೋರಲಾಗಿದೆ. ಉದ್ಯೋಗ ಮೇಳದಲ್ಲಿ ಖಾಸಗಿ ವಲಯದ ಹೆಸರಾಂತ ಸಂಸ್ಥೆಗಳು ಭಾಗವಹಿಸಲಿವೆ.

ಆಸಕ್ತ ಯುವಕ ಯುವತಿಯರು ತಮ್ಮಲ್ಲಿನ ತಾಂತ್ರಿಕ ಮತ್ತು ತಾಂತ್ರಿಕೇತರ ವಿಭಾಗದಲ್ಲಿ ಶೈಕ್ಷಣಿಕ ಆಧಾರದಲ್ಲಿ ಉದ್ಯೋಗಾವಕಾಶ ಪಡೆದುಕೊಳ್ಳಬಹುದು. ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಪಡೆದ ಯುವಕರು, ಯುವತಿಯರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಮಾಹಿತಿಗಾಗಿ ಮೊ. 99649 07444, 99649 08444 ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...