alex Certify ಉದ್ಯೋಗಾವಕಾಶ ನಿರೀಕ್ಷೆಯಲ್ಲಿದ್ದ ವಿಕಲಚೇತನರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾವಕಾಶ ನಿರೀಕ್ಷೆಯಲ್ಲಿದ್ದ ವಿಕಲಚೇತನರಿಗೆ ಗುಡ್ ನ್ಯೂಸ್

ದಾವಣಗೆರೆ: ಸಮರ್ಥನಂ ಅಂಗವಿಕಲರ ಸಂಸ್ಥೆ ಬೆಂಗಳೂರು ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಉದ್ಯೋಗಾವಕಾಶ ನಿರೀಕ್ಷೆಯಲ್ಲಿರುವ ವಿಕಲಚೇತನರಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಇರುವ ತೋಟದಪ್ಪನ ಛತ್ರದ ಪಕ್ಕದಲ್ಲಿರುವ ಮ್ಯಾನ್‍ಫೋಬೆಲ್ ಹೋಟಲ್ ಹಾಗೂ ಕನ್ವೆಷನ್ ಸೆಂಟರ್ ನಲ್ಲಿ ಫೆ.25 ರಂದು ಬೆಳಿಗ್ಗೆ 9.30 ಗಂಟೆಗೆ ಉದ್ಯೋಗಮೇಳ ಆಯೋಜಿಸಲಾಗಿದ್ದು, ವಿವಿಧ 40 ಕಂಪನಿಗಳು ಮೇಳದಲ್ಲಿ ಭಾಗವಹಿಸಲಿವೆ.

ಜಿಲ್ಲೆಯ ಆಸಕ್ತ ವಿಕಲಚೇತನರು ಉದ್ಯೋಗಮೇಳದಲ್ಲಿ ಭಾಗವಹಿಸಿ ಉದ್ಯೋಗಮೇಳದ ಸದುಪಯೋಗ ಪಡೆಯುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವೀರಭದ್ರ ಪಾಟೀಲ್: 6364867795 (placements@samarthanam.org)  ಸುಭಾಷ್: 9449864693 (centerheadBangalore@samarathanam.org) ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...