
ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜು.8 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ವಾಕ್ ಇನ್ ಇಂಟರ್ ವ್ಯೂವ್ ಆಯೋಜಿಸಲಾಗಿದೆ.
ವಾಕ್ ಇನ್ ಇಂಟರ್ವ್ಯೂವ್ ನಲ್ಲಿ ಬೆಂಗಳೂರಿನ ಬಿ.ಎಸ್.ಎಸ್. ಮೈಕ್ರೋ ಫೈನಾನ್ಸ್ ಲಿ. ಅವರು ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಯಾವುದೇ ಪದವಿ ಪೂರ್ಣಗೊಳಿಸಿದ 20 ರಿಂದ 28 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
ಅಭ್ಯರ್ಥಿಗಳು ಸ್ವವಿವರದ ಮಾಹಿತಿ, ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ, ಮೊ.ಸಂ.: 9901059256, 08539-220859 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಯಮ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.