alex Certify SSLC, PUC, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC, PUC, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 29 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ ನಡೆಯಲಿದೆ.

ಉದ್ಯೋಗ ಮೇಳದಲ್ಲಿ ಐಸಿಸಿಎಸ್ ಬಿಪಿಓ ಲಿಮಿಟೆಡ್, ಮೈಸೂರು, ಜಸ್ಟ್ ಡಯಲ್-ಬೆಂಗಳೂರು, ಗ್ರಾಸ್ ರೂಟ್ಸ್- ಮೈಸೂರು, ಇಕ್ವಾಲೈಜ್ ಆರ್‍ಸಿಎಂ ಸೇವೆಗಳು (ಸರ್ವಿಸ್) ಮೈಸೂರು, ಹಾಗೂ ಮಾಂಡೋವಿ ಮೋಟಾರ್ಸ್ ಮೈಸೂರು, ಕ್ಲಬ್ ಮಹೀಂದ್ರ ರೆಸಾರ್ಟ್, ಮಡಿಕೇರಿ ಈ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ(ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...