alex Certify JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಜು.12 ರಂದು ಬಳ್ಳಾರಿಯಲ್ಲಿ ನೇರ ಸಂದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಜು.12 ರಂದು ಬಳ್ಳಾರಿಯಲ್ಲಿ ನೇರ ಸಂದರ್ಶನ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಜುಲೈ 12 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 02 ರವರೆಗೆ ನಗರದ ತಾಲೂಕು ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

ನೇರ ಸಂದರ್ಶನದಲ್ಲಿ 03 ರಿಂದ 04 ಕಂಪನಿಗಳು ಭಾಗವಹಿಸಲಿದ್ದು, ಇವರು ತಮ್ಮಲ್ಲಿನ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

*ವಿದ್ಯಾರ್ಹತೆ:* ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಪ್ಲೊಮಾ, ಪದವಿ(ತಾಂತ್ರಿಕವಲ್ಲದ) ಹೊಂದಿರಬೇಕು. ತಮ್ಮ ಮೂಲ ಆಧಾರ ಕಾರ್ಡ್ ಪ್ರತಿ ಮತ್ತು ಸ್ವ-ವಿವರಗಳೊಂದಿಗೆ (RESUME) ಭಾಗವಹಿಸಬೇಕು.
ಈ ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಆಸಕ್ತ ಅಭ್ಯರ್ಥಿಗಳು ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ತಾಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೊಗ ವಿನಿಮಯ ಕಚೇರಿ ಅಥವಾ ಮೊ.8073365184, 9019692898, 7892971984 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...