ಕಲಬುರಗಿ : ವಿಶ್ವ ಕೌಶಲ್ಯ ದಿನದ ಅಂಗವಾಗಿ ಕಲಬುರಗಿ ನಗರದ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಜುಲೈ 15 ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸದರಿ ಉದ್ಯೋಗ ಮೇಳದಲ್ಲಿ ಭಾಗವಹಿಸಲಿಚ್ಛಿಸುವ ಅಭ್ಯರ್ಥಿಗಳು ತಮ್ಮ ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐಟಿಐ, ಡಿಪ್ಲೋಮಾ ಹಾಗೂ ಪದವೀಧರ ತಮ್ಮ ಶೈಕ್ಷಣಿಕ ಅರ್ಹತೆಯ ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ೩೭೧(ಜೆ) ಪ್ರಮಾಣಪತ್ರ ಹಾಗೂ 2 ಪಾಸ್ಪೋರ್ಟ್ ಸೈಜ್ ಭಾವಚಿತ್ರದೊಂದಿಗೆ ಇದೇ ಜುಲೈ 10 ರಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಬಂದು ನೋಂದಣಿ ಮಾಡಿಕೊಳ್ಳಬೇಕು.
ಜುಲೈ 15 ರಂದು ಕಾರ್ಯಾಗಾರ: ವಿಶ್ವ ಕೌಶಲ್ಯ ದಿನದ ಅಂಗವಾಗಿ ಇದೇ ಜುಲೈ 14 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೆ.ಎ.ಎಸ್. ಮತ್ತು ಕೆ.ಪಿ.ಎಸ್.ಸಿ. ಪರೀಕ್ಷಾರ್ಥಿಗಳಿಗೆ ಪರ್ಸನಾಲಿಟಿ ಡೆವಲಪ್ಮೆಂಟ್ ಹಾಗೂ ಸಾಫ್ಟ್ಸ್ಕಿಲ್ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಬಹುದಾಗಿದೆ. ಈ ಕಾರ್ಯಗಾರದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472- -274846 ಗೆ ಸಂಪರ್ಕಿಸಲು ಕೋರಲಾಗಿದೆ.