alex Certify JOB FAIR : ಉದ್ಯೋಗಾಂಕ್ಷಿಗಳೇ ಗಮನಿಸಿ : ಜುಲೈ 14 ರಂದು ಉಡುಪಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB FAIR : ಉದ್ಯೋಗಾಂಕ್ಷಿಗಳೇ ಗಮನಿಸಿ : ಜುಲೈ 14 ರಂದು ಉಡುಪಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಉಡುಪಿ : ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜುಲೈ 14 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...