alex Certify SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಕಲಬುರಗಿ: ಜುಲೈ 8 ಹಾಗೂ 9 ರಂದು ಎರಡು ದಿನಗಳ ಕಾಲ ಪ್ರತಿದಿನ ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ಕಲಬುರಗಿಯಲ್ಲಿ ಉದ್ಯೋಗ ಮೇಳ ಏರ್ಪಡಿಸಲಾಗಿದೆ.

ಮೆರಿಟ್ಯೂಡ್ ಸ್ಕೀಲ್ ಡೆವಲಪ್‍ಮೆಂಟ್ ಪ್ರೈವೇಟ್ ಲಿಮಿಟೆಡ್ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಇದೇ ಜುಲೈ 8 ಹಾಗೂ 9 ರಂದು ಎರಡು ದಿನಗಳ ಕಾಲ ಪ್ರತಿದಿನ ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ಕೆಳಕಂಡ ಹುದ್ದೆಯ ನೇಮಕಾತಿಗಾಗಿ ಕಲಬುರಗಿ ಎಂಎಸ್‍ಕೆ ಮಿಲ್ ರಸ್ತೆಯ ಬಸ್ ಡಿಪೋ ನಂ.1 ರ ಎದುರುಗಡೆಯಿರುವ(ಪುರುಷ) ಸರ್ಕಾರಿ ಕೈಗಾರಿಕಾ ಸಂಸ್ಥೆಯಲ್ಲಿ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಕೌಶಲ್ಯ ಮಿಷನ್‍ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

ವಾಣಿಜ್ಯ ಸೇವಾ ಅಧಿಕಾರಿ (ಕ್ಷೇತ್ರ ಕಾರ್ಯ) ಹುದ್ದೆಗೆ ಅರ್ಹ ಪುರುಷ ಅಭ್ಯರ್ಥಿಗಳು ಮಾತ್ರ ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕು. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ., ಐಟಿಐ, ಪಿಯುಸಿ ಹಾಗೂ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 32 ವರ್ಷದೊಳಗಿರಬೇಕು. ಮಾಸಿಕ 15,000 ರಿಂದ 18,000 ರೂ. ವೇತನ ನೀಡಲಾಗುತ್ತದೆ.

ಅರ್ಹ ಪುರುಷ ಅಭ್ಯರ್ಥಿಗಳನ್ನು ಮೇಲ್ಕಂಡ ದಿನದಂದು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8660996093, 7483155345 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...