ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ 13,000 ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲಾಗುವುದು. ವಿಧಾನ ಪರಿಷತ್ ನಲ್ಲಿ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಖಾಲಿ ಇರುವ 13 ಸಾವಿರಕ್ಕೂ ಅಧಿಕ ಸರ್ಕಾರಿ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಸದಸ್ಯ ಯು.ಬಿ. ವೆಂಕಟೇಶ್ ಅವರ ಗಮನ ಸೆಳೆಯುವ ಸೂಚನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಕೋಟ ಶ್ರೀನಿವಾಸ ಪೂಜಾರಿ ಅವರು, ಕೊರೋನಾ, ಆರ್ಥಿಕ ಹಿಂಜರಿತ ಮೊದಲಾದ ಕಾರಣಗಳಿಂದಾಗಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿದೆ. ಈಗ ನೇಮಕಾತಿ ಪ್ರಕ್ರಿಯೆಗೆ ಶೀಘ್ರವೇ ಚಾಲನೆ ನೀಡಲಾಗುತ್ತದೆ. 13 ಸಾವಿರಕ್ಕೂ ಅಧಿಕ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.