alex Certify ಕೆಲಸದ ನಿರೀಕ್ಷೆಯಲ್ಲಿದ್ದ SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಇಲ್ಲಿದೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದ SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಇಲ್ಲಿದೆ ಗುಡ್ ನ್ಯೂಸ್

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮಿನಿ ಉದ್ಯೋಗ ಮೇಳವನ್ನು ಇದೇ ಆಗಸ್ಟ್ 24 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30 ರವರೆಗೆ ಆಯೋಜಿಸಲಾಗಿದೆ.

ಮಿನಿ ಉದ್ಯೋಗ ಮೇಳದಲ್ಲಿ ಆಕ್ಸಿಸ್ ಬ್ಯಾಂಕ್, ಸಾಯಿ ಬಯೋ ಫರ್ಟಿಲೈಸರ್ಸ್, ಹೆಚ್.ಡಿ.ಎಫ್.ಸಿ. ಬ್ಯಾಂಕ್, ಅನ್ನದಾತ ಬಯೋ ಪ್ಲಾನಟೆಕ್ ಹುಬ್ಬಳ್ಳಿ ಮತ್ತು ಹೆಚ್.ಡಿ.ಎಫ್.ಸಿ ಲೈಫ್ ಇನ್ಸೂರೆನ್ಸ್ ಹೊಸಪೇಟೆ ಸಂಸ್ಥೆಯವರು ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಯಾವುದೇ ಪದವಿ ಪೂರ್ಣಗೊಳಿಸಿದ 18 ರಿಂದ 35 ವರ್ಷದೊಳಗಿನ ಯುವಕ ಮತ್ತು ಯುವತಿಯರು ಈ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ತಮ್ಮ ಸ್ವ-ವಿವರದ ಮಾಹಿತಿಯುಳ್ಳ 05 ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್, 02 ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರಿಗೆ ಅಥವಾ ಮೊ.ಸಂ. 9880758997, 08539-220859 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಆ.25 ರಂದು ಉದ್ಯೋಗ ಮೇಳ

ಮಡಿಕೇರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 25 ರಂದು ಬೆಳಗ್ಗೆ 10.30 ರಿಂದ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಉದ್ಯೋಗ ಮೇಳದಲ್ಲಿ ಕ್ಲಬ್ ಮಹೀಂದ್ರ ರೆಸಾರ್ಟ್, ಮಡಿಕೇರಿ, ಪ್ಯಾಲೇಸ್ ಟೊಯೋಟಾ, ಮೈಸೂರು, ಕೂರ್ಗ್ ಗವದನ್ ರೆಸಾರ್ಟ್, ಮೇಕೇರಿ, ಎಸ್‍ಎಲ್‍ಎನ್ ಕಾಫಿ ಪ್ರೈ.ಲಿ., ಕೂಡಿಗೆ, ಎಲ್ ಅಂಡ್ ಟಿ ಟೆಕ್ನಾಲಜಿ ಸರ್ವೀಸಸ್, ಮೈಸೂರು, ಸಚಿನೆಡರ್ ಎಲೆಕ್ಟ್ರಿಕ್ ಇಂಡಿಯಾ ಪ್ರೈ ಲಿ., ಮೈಸೂರು ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.08272-225851 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...