ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ(KRIDL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸಹಾಯಕ ಇಂಜಿನಿಯರ್ ಗ್ರೇಡ್-1 (ಸಿವಿಲ್) 35 ಹುದ್ದೆಗಳು, ಕಿರಿಯ ಇಂಜಿನಿಯರ್(ಸಿವಿಲ್) 18 ಹುದ್ದೆಗಳು, ಪ್ರಥಮ ದರ್ಜೆ ಸಹಾಯಕರು 5 ಹಾಗೂ ದ್ವಿತೀಯ ದರ್ಜೆ ಸಹಾಯಕರ 10 ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕ್ರಮಕೈಗೊಂಡಿದ್ದು, ಅರ್ಜಿ ಸಲ್ಲಿಕೆ ಮತ್ತು ನೇಮಕಾತಿ ಕುರಿತಾದ ವಿವರಗಳಿಗಾಗಿ www.kea.kar.nic.in ಗಮನಿಸಬಹುದಾಗಿದೆ.