alex Certify ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮವು 2021-22ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ ಹಾಗೂ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಕಳೆದ ಸಾಲಿನಲ್ಲಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ 2021-22ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದು ನವೀಕರಣಕ್ಕಾಗಿ ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರುವವರು https://suvidha.karnataka.gov.in ಜಾಲತಾಣದಲ್ಲಿ ದಿ: 18/12/2021 ರಿಂದ ದಿ: 31/01/2022 ರೊಳಗಾಗಿ ಅರ್ಜಿಯನ್ನು ಸಲ್ಲಿಸುವುದು.

ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಯೋಜನೆಯಡಿ ಸೌಲಭ್ಯ ಪಡೆಯ ಬಯಸುವ ಸಾಮಾನ್ಯ ವರ್ಗ ಆರ್ಯ ವೈಶ್ಯ ಸಮುದಾಯದ 18 -55 ವರ್ಷದೊಳಗಿನ ಅಭ್ಯರ್ಥಿಗಳು ನಿಗಮದ ವೆಬ್‍ಸೈಟ್ kacdc.karnataka.gov.in ನ್ನು ಸಂಪರ್ಕಿಸಬಹುದು.

ಸೂಕ್ತ ದಾಖಲೆಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸುವವರ ಕುಟುಂಬದ ವಾರ್ಷಿಕ ವರಮಾನ 3 ಲಕ್ಷ ರೂ. ಮಿತಿಯೊಳಗಿರಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಡಿ ಸೌಲಭ್ಯ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಅರ್ಜಿ ಸಲ್ಲಿಸುವಂತಿಲ್ಲ.

ವಿ.ಸೂ.: ಮಹಿಳೆಯರಿಗೆ ಶೇ.33 ರಷ್ಟು ಹಾಗೂ ವಿಕಲ ಚೇತನರಿಗೆ ಶೇ. 5 ರಷ್ಟು ಮೀಸಲಾತಿ ಇರುತ್ತದೆ.  ಆಧಾರ್ ಸಂಖ್ಯೆ ನಿಮ್ಮ ಮೊಬೈಲ್ ಸಂಖ್ಯೆಗೆ ಮತ್ತು ಬ್ಯಾಂಕ್ ಖಾತೆಗೆ ಜೋಡಣೆಯಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-229634 ಅಥವಾ kacdc.karnataka.gov.in ವೆಬ್‍ಸೈಟ್‍ ಗಮನಿಸುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...