alex Certify ಎಸ್ಎಸ್ಎಲ್ಸಿ, ಪಿಯುಸಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ವಿವಿಧ ಕಂಪನಿಗಳಲ್ಲಿ ಉದ್ಯೋಗಾವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್ಎಸ್ಎಲ್ಸಿ, ಪಿಯುಸಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ವಿವಿಧ ಕಂಪನಿಗಳಲ್ಲಿ ಉದ್ಯೋಗಾವಕಾಶ

ಮಡಿಕೇರಿ: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ 29 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ಕ್ಲಬ್ ಮಹೀಂದ್ರ ರೆಸಾರ್ಟ್ ಮಡಿಕೇರಿ, ಹಿಮತ್ಸಂಗ ಲೈನ್ಸ್ ಹಾಸನ, ಹ್ಯೂಂಡಾಯಿ ಕಾರ್ ಶೋರೂಮ್ ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ.8296020826 ನ್ನು ಸಂಪರ್ಕಿಸಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...